Spread the love

ಬೆಂಗಳೂರು: ಬೆಂಗಳೂರಿನಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿ ಬಂದಿದೆ. ಎರಡು ಬೈಕ್ ಗಳಲ್ಲಿ ಬಂದಿದ್ದ ನಾಲ್ವರು ಯುವಕರು ಅನುಚಿತ ವರ್ತನೆ ತೋರಿದ್ದಾರೆ.

ಮಧ್ಯಾಹ್ನ ವಿದ್ಯಾರ್ಥಿನಿ ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ವೇಳೆ ಕೈ ಹಿಡಿದು ಎಳೆದಾಡಿ ಕತ್ತಿಗೆ ಜೋರಾಗಿ ಪುಂಡರು ಹೊಡೆದಿದ್ದಾರೆ.

ಈ ವೇಳೆ ಯುವತಿ ಜೋರಾಗಿ ಕಿರುಚಿಕೊಂಡಾಗ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಾಹಿತಿ ಪಡೆದ ಪೊಲೀಸರು ಪುಂಡರ ಬಂಧನಕ್ಕೆ ಬಲೆ ಬೀಸಿದ್ದಾರೆ.


Spread the love

By admin