ಧಾರವಾಡ: ಟ್ಯಾಂಕರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸ್ನೇಹಿತರು ಸಾವನ್ನಪ್ಪಿದ ಘಟನೆ ಧಾರವಾಡ ಸಮೀಪ ನಡೆದಿದೆ.
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗಟಿಕೊಪ್ಪ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಟ್ಯಾಂಕರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಹುಬ್ಬಳ್ಳಿ ನಿವಾಸಿಗಳಾದ ಮೊಹಮ್ಮದ್ ಇಶಾನ್, ಇಸ್ಮಾಯಿಲ್, ಮೊಹಮ್ಮದ್ ಸೈಫ್ ಮೃತಪಟ್ಟಿದ್ದಾರೆ.
ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.