Spread the love

ಬೆಂಗಳೂರು: ಬಿಜೆಪಿಯಲ್ಲಿ ದೇಶದ ಯಾರು ಬೇಕಾದರೂ ಮುಖ್ಯಮಂತ್ರಿ, ಪ್ರಧಾನಿಯಾಗಬಹುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅಶೋಕ್, ಬಿಜೆಪಿಯಲ್ಲಿ ಯಾರು ಬೇಕಾದರೂ ಸಿಎಂ ಆಗಬಹುದು, ಪಿಎಂ ಆಗಬಹುದು ಎಂದು ಹೇಳಿದರು.

 

ನಮ್ಮದು ಕುಟುಂಬದ ಪಕ್ಷವಲ್ಲ, ನಮ್ಮದು ರಾಷ್ಟ್ರೀಯ ಪಕ್ಷ. ಹಾಗಾಗಿ ದೇಶದಲ್ಲಿರುವ ಯಾರು ಬೇಕಾದರೂ ಮುಖ್ಯಮಂತ್ರಿ, ಪ್ರಧಾನಿಯಾಗಬಹುದು. ಜೆಡಿಎಸ್ ನಲ್ಲಿ ಸಿಎಂ ಬಗ್ಗೆ ಅವರ ಮನೆಯಲ್ಲಿಯೇ ತೀರ್ಮಾನ ಆಗಬೇಕು. ಆದರೆ ನಮ್ಮಲ್ಲಿ ಹಾಗಿಲ್ಲ ಎಂದರು.

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವೋಟಿಗಾಗಿ ಈಗ ಬ್ರಾಹ್ಮಣರ ಬಗ್ಗೆ ಮಾತನಾಡುತ್ತಿದ್ದಾರೆ. ಇದುವರೆಗೆ ಯಾವುದೇ ಮುಖ್ಯಮಂತ್ರಿಯಾದವರು ಜಾತಿ ಬಗ್ಗೆ ಮಾತನಾಡಿರಲಿಲ್ಲ ಎಂದು ಹೇಳಿದರು.

ಪ್ರಹ್ಲಾದ್ ಜೋಶಿಯವರನ್ನು ಸಿಎಂ ಮಾಡಲು ಆರ್.ಎಸ್.ಎಸ್ ಹುನ್ನಾರ ಎಂಬ ಹೆಚ್.ಡಿ.ಕೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಆರ್.ಅಶೋಕ್, ನಮ್ಮಲ್ಲಿ ಮುಖ್ಯಮಂತ್ರಿಯಾಗಬೇಕಾದರೆ ಟ್ಯಾಲೆಂಟ್ ಇರಬೇಕು. ಜೋಶಿ ಸಿಎಂ ಆಗುವ ಬಗ್ಗೆ ಕೇಂದ್ರದಲ್ಲಿ ತೀರ್ಮಾನವಾಗುತ್ತದೆ. ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಕೇಂದ್ರದ ನಾಯಕರು ನಿರ್ಧರಿಸುತ್ತಾರೆ. ಈಗಲೂ ಬಸವರಾಜ್ ಬೊಮ್ಮಾಯಿ ಅವರೇ ಸಿಎಂ ಆಗಿದ್ದಾರೆ. ಅವರ ನಾಯಕತ್ವದಲ್ಲಿಯೇ ಚುನಾವಣೆ ಎದುರಿಸುತ್ತೇವೆ. ಈ ಬಗ್ಗೆ ಈಗಾಗಲೇ ಕೇಂದ್ರ ಸಚಿವ ಅಮಿತ್ ಶಾ ಕೂಡ ಹೇಳಿದ್ದಾರೆ ಎಂದು ತಿಳಿಸಿದರು.


Spread the love

By admin