Spread the love

ಚಿಕ್ಕಬಳ್ಳಾಪುರ: ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಪದೇ ಪದೆ ರಾಜ್ಯಕ್ಕೆ ಭೇಟಿ ನೀಡುತ್ತಿರುವ ವಿಚಾರವಾಗಿ, ರಾಜ್ಯ ಬಿಜೆಪಿಯಲ್ಲಿ ನಾಯಕತ್ವವೇ ಇಲ್ಲ ಎಂದು ವ್ಯಂಗ್ಯವಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಡಾ.ಸುಧಾಕರ್, ತಮ್ಮ ತಟ್ಟೆಯಲ್ಲಿ ಏನಿದೆ ನೋಡಿಕೊಳ್ಳಲಿ ಎಂದು ಟಾಂಗ್ ನೀಡಿದ್ದಾರೆ.

 

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ನವರು ಮೊದಲು ತಮ್ಮ ತಟ್ಟೆಯಲ್ಲಿ ಏನಿದೆ ನೋಡಿಕೊಳ್ಳಲಿ, ಆಮೇಲೆ ನಮ್ಮ ತಟ್ಟೆ ನೋಡಿ. ಕಾಂಗ್ರೆಸ್ ನವರು ರಾಹುಲ್ ಗಾಂಧಿಯನ್ನು ಕರೆಸಿ ರಸ್ತೆ ರಸ್ತೆಯಲ್ಲಿ ಯಾಕೆ ಅಲೆಸಿದರು ? ರಾಜ್ಯದಲ್ಲಿ ಮಹಿಳಾ ನಾಯಕಿಯರು ಇದ್ದರೂ ಪ್ರಿಯಾಂಕಾ ಗಾಂಧಿ ಅವರನ್ನು ಕರೆಸಿದ್ಯಾಕೆ ? ಎಂದು ಪ್ರಶ್ನಿಸಿದ್ದಾರೆ.

ನಮಗೆ ನರೇಂದ್ರ ಮೋದಿ ಎಂಬ ಹೆಮ್ಮೆಯ ಪ್ರಧಾನಮಂತ್ರಿಗಳಿದ್ದಾರೆ. ಮೋದಿ ಎಂಬ ವಿಶ್ವಮಟ್ಟದ ನಾಯಕ ನಮಗಿದ್ದಾರೆ. ಕಾಂಗ್ರೆಸ್ ನವರು ರಾಜಕೀಯವಾಗಿ ಹತಾಶರಾಗಿ ಮಾತನಾಡುತ್ತಿದ್ದಾರೆ ಎಂದು ಹೇಳಿದರು.


Spread the love

By admin