Spread the love

ಬೆಂಗಳೂರು: ಹೃದಯಾಘಾತದಿಂದ ಕಬಡ್ಡಿ ಆಟವಾಡುತ್ತಿದ್ದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಅತ್ತಿಬೆಲೆಯ ಖಾಸಗಿ ಕಾಲೇಜಿನಲ್ಲಿ ಕ್ರೀಡಾ ಉತ್ಸವದ ವೇಳೆ ನಡೆದಿದೆ.

ಧಾರವಾಡ ಮೂಲದ ವಿದ್ಯಾರ್ಥಿನಿ ಸಂಗೀತಾ(17) ಮೃತಪಟ್ಟವರು ಎಂದು ಹೇಳಲಾಗಿದೆ.

ಆನೇಕಲ್ ತಾಲೂಕಿನ ಬಳಗಾರನಹಳ್ಳಿಯಲ್ಲಿ ವಾಸವಾಗಿದ್ದ ಸಂಗೀತಾ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರ ತಂಡದಲ್ಲಿ ಆಟವಾಡುತ್ತಿದ್ದರು.

ಹೃದಯಾಘಾತವಾದ ಕೂಡಲೇ ಸಂಗೀತಾ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಅತ್ತಿಬೆಲೆ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ಸಂಗೀತಾ ಮೃತದೇಹ ಸ್ಥಳಾಂತರ ಮಾಡಲಾಗಿದೆ. ವಿದ್ಯಾರ್ಥಿನಿ ಸಂಗೀತಾ ಸಾವಿನ ಹಿನ್ನೆಲೆಯಲ್ಲಿ ಇಂದು ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.


Spread the love

By admin