Spread the love

ದಾವಣಗೆರೆ: ದಾವಣಗೆರೆ ಸಮೀಪ ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಮೂವರು ಯುವಕರ ದುರ್ಮರಣ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಉದ್ದೇಶಪೂರ್ವಕವಾಗಿ ಯುವಕರ ಹತ್ಯೆ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ದಾವಣಗೆರೆಯ ಅನಗೋಡ ಘಟನಾ ಸ್ಥಳದಲ್ಲಿನ ಸಿಸಿ ಟಿವಿ ಕ್ಯಾಮರಾದಲ್ಲಿ ಲಾರಿಯಿಂದ ಅಪಘಾತ ಸಂಭವಿಸಿರುವ ಸಾಧ್ಯತೆ ಬಗ್ಗೆ ಸುಳಿವು ಸಿಕ್ಕಿದೆ.

ಅಲ್ಲದೇ ಅಪಘಾತ ನಡೆದ ಸ್ಥಳದಲ್ಲಿ ಕಬ್ಬಿಣದ ರಾಡ್ ಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಮೂವರು ಯುವಕರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಎರಡು ಬೈಕ್ ಗಳಲ್ಲಿ ಆರು ಯುವಕರು ತೆರಳಿದ್ದರು. ರಾತ್ರಿ ಊಟ ಮುಗಿಸಿ ವಾಪಸ್ ಬರುವಾಗ ಅಪಘಾತ ಸಂಭವಿಸಿ ಮೂವರು ಯುವಕರು ಸಾವನ್ನಪ್ಪಿದ್ದಾರೆ ಎನ್ನಲಾಗಿತ್ತು. ಘಟನೆಗೂ ಮುನ್ನ ಲಾರಿ ಚಾಲಕ ಹಾಗೂ ಯುವಕರ ನಡುವೆ ಗಲಾಟೆಯಾಗಿರುವ ಸಾಧ್ಯತೆ ಇದ್ದು, ಉದ್ದೇಶಪೂರ್ವಕವಾಗಿ ಲಾರಿ ಚಾಲಕ ಯುವಕರ ಮೇಲೆ ಲಾರಿ ಹರಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಮೂವರು ಸಾವನ್ನಪ್ಪಿದ್ದು, ಮೂವರು ಎಸ್ಕೇಪ್ ಆಗಿದ್ದಾರೆ. ಬಚಾವಾಗಿರುವ ಮೂವರಲ್ಲಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.


Spread the love

By admin