Spread the love

ನೋಯ್ಡಾ ಸೆಕ್ಟರ್ 8 ರಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟ ಸಂಭವಿಸಿ ನವಜಾತ ಶಿಶು ಸೇರಿದಂತೆ 2 ಮಕ್ಕಳು ಸಾವು ಕಂಡಿದ್ದಾರೆ.

ನೋಯ್ಡಾದ ಸೆಕ್ಟರ್ 8ರ ಕೊಳೆಗೇರಿಯಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ದುರಂತ ಸಂಭವಿಸಿದೆ. ನವಜಾತ ಶಿಶು ಸೇರಿದಂತೆ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ನವಜಾತ ಶಿಶು ಸೇರಿದಂತೆ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಗಾಯಗೊಂಡ ಇತರ ನಾಲ್ವರನ್ನು ದೆಹಲಿಯ ಸಫ್ದರ್‌ಗಂಜ್‌ಗೆ ಕಳುಹಿಸಲಾಗಿದೆ. ವಿಷಯದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.


Spread the love

By admin