Spread the love

ವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 124 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,750 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ದೇಶದಲ್ಲಿ 1,843 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,51,525 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 7,591 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,62,96,625 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,28,492 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.


Spread the love

By admin