Spread the love

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ, ಸಮಾವೇಶಕ್ಕಾಗಿ ರಾಜ್ಯಕ್ಕೆ ಹಲವು ಬಾರಿ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

ದೆಹಲಿಯಿಂದ ಹೊರಟು ರಾತ್ರಿ 7:40ಕ್ಕೆ ಬೆಂಗಳೂರಿನ ಹೆಚ್.ಎಎ.ಎಲ್.

ಏರ್ ಪೋರ್ಟ್ ಗೆ ಆಗಮಿಸಲಿರುವ ಪ್ರಧಾನಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಯಲಹಂಕ ವಾಯುಪಡೆ ನಿಲ್ದಾಣದಲ್ಲಿ ನಡೆಯಲಿರುವ ಐದು ದಿನಗಳ ಏರೋ ಇಂಡಿಯಾ 14ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ. ಪ್ರಧಾನಿಯವರು ಮುಂದಿನ ತಿಂಗಳು ಮೂರು ಬಾರಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.


Spread the love

By admin