ಹುಬ್ಬಳ್ಳಿ: ಬಿಜೆಪಿ ಮಾಜಿ ಶಾಸಕನನ್ನು ಜೆಡಿಎಸ್ ಗೆ ಸೆಳೆಯಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಯತ್ನಿಸಿದ್ದಾರೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಆಪರೇಷನ್ ಜೆಡಿಎಸ್ ಆರಂಭಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಮಾಜಿ ಶಾಸಕ ವೀರಭದ್ರಪ್ಪ ಹಾಲರವಿಯನ್ನು ಜೆಡಿಎಸ್ ಗೆ ಕರೆ ತರುವ ನಿಟ್ಟಿನಲ್ಲಿ ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ರಾಜ್ಯದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಜನರಿಗೆ ಮೋಸ ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದರು.
ಏರ್ ಶೋ ಬಡತನ ನಿವಾರಣೆ ಮಾಡುತ್ತಾ? ಏರ್ ಶೋ ಬಡತನ ನಿವಾರಿಸುವಂತಹ ಕಾರ್ಯಕ್ರಮವೇ? ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ಚುನಾವಣೆ ನೆಪದಲ್ಲಿ ಬಿಜೆಪಿ ಸರ್ಕಾರ ಜನರ ದಾರಿ ತಪ್ಪಿಸುತ್ತಿದೆ ಎಂದು ಗುಡುಗಿದ್ದಾರೆ.