Spread the love

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿದ್ದು, ಮಾಜಿ ಸಚಿವ, ಬಿಜೆಪಿ ನಾಯಕ ಬಾಬುರಾವ್ ಚಿಂಚನಸೂರ ಕಾಂಗ್ರೆಸ್ ಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿಧಾನಪರಿಷತ್ ಸದಸ್ಯರಾಗಿರುವ ಚಿಂಚನಸೂರ, ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರಾಗಿದ್ದು, ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

 

ಇಂದೇ ಬಿಜೆಪಿ ತೊರೆಯಲಿದ್ದಾರೆ ಎಂಬ ಮಾತು ಕೇಳಿಬರುತ್ತಿದ್ದು, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್ ಹಾಗೂ ವೀರಪ್ಪ ಮೊಯ್ಲಿ ಅವರ ಜೊತೆ ಈಗಾಗಲೇ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.


Spread the love

By admin