Spread the love

ವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 124 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,753 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ದೇಶದಲ್ಲಿ 1,837 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,51,610 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 1,476 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,62,98,101 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 59,037 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.


Spread the love

By admin