ಫೆಬ್ರವರಿ 11ರಂದು ರಾಜ್ಯದಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ನಡೆದಿದ್ದು, ಬರೋಬ್ಬರಿ 64.13 ಲಕ್ಷ ಪ್ರಕರಣಗಳು ಇತ್ಯರ್ಥವಾಗಿವೆ. ಅಲ್ಲದೆ ಇದೇ ಸಂದರ್ಭದಲ್ಲಿ ಸಂತ್ರಸ್ತರಿಗೆ 1,404 ಕೋಟಿ ರೂಪಾಯಿ ಪರಿಹಾರ ಸಿಕ್ಕಿದೆ.
ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ನ್ಯಾಯಮೂರ್ತಿ ಬಿ.
ವೀರಪ್ಪ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದು, ಕೇವಲ ಒಂದೇ ದಿನದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಪ್ರಕರಣ ಇತ್ಯರ್ಥಗೊಂಡಿರುವುದು ತಮಗೆ ಸಮಾಧಾನ ತಂದಿದೆ ಎಂದರು.
ಈ ಹಿಂದಿನ ‘ಲೋಕ ಅದಾಲತ್’ ಗಳಿಗೆ ಹೋಲಿಸಿದರೆ ಫೆಬ್ರವರಿ 11ರಂದು ನಡೆದ ಲೋಕ ಅದಾಲತ್ ಸಾರ್ವಕಾಲಿಕ ದಾಖಲೆಯಾಗಿದೆ ಎಂದ ಅವರು, ಹೈಕೋರ್ಟ್ ಹಾಗೂ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 1,87,171 ಪ್ರಕರಣಗಳು ಹಾಗೂ 62,26,437 ವ್ಯಾಜ್ಯಪೂರ್ವ ಪ್ರಕರಣಗಳು ಸೇರಿ ಒಟ್ಟು 64,13,608 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ ಎಂದು ತಿಳಿಸಿದರು.