Spread the love

ಬೆಂಗಳೂರು: ಐದು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ 9 ರಿಂದ 17ರ ವರೆಗೆ ಮೌಲ್ಯಾಂಕನ ಪರೀಕ್ಷೆ ನಡೆಯಲ್ಲಿದ್ದು, ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಿದೆ.

 

ಐದನೇ ತರಗತಿ ಕನ್ನಡ ಭಾಷಾ ಪ್ರಶ್ನೆ ಪತ್ರಿಕೆ 40 ಅಂಕಗಳಿದ್ದು, ಎರಡು ಗಂಟೆ ಅವಧಿ ನೀಡಲಾಗಿದೆ. ಮೊದಲ ಪುಟದಲ್ಲಿ ವಿದ್ಯಾರ್ಥಿಗಳು ತಮ್ಮ ವಿವರ ದಾಖಲಿಸಬೇಕು. ಅದರ ಕೆಳಗೆ ಮೌಲ್ಯಮಾಪನದ ಪಟ್ಟಿಯಿದ್ದು, ಮೌಲ್ಯಮಾಪಕರು ಇದನ್ನು ಬಳಕೆ ಮಾಡಬೇಕಿದೆ. ಒಂದು ಅಂಕದ 20 ಪ್ರಶ್ನೆಗಳು ಬಹು ಆಯ್ಕೆ ಮಾದರಿಯಲ್ಲಿವೆ. ಎರಡು ಅಂಕಗಳ ಐದು ಪ್ರಶ್ನೆಗಳು, ಮೂರು ಅಂಕದ ಎರಡು ಪ್ರಶ್ನೆ ಹಾಗೂ ನಾಲ್ಕು ಅಂಕದ ಒಂದು ಪ್ರಶ್ನೆ ಇದೆ. ಇದೇ ರೀತಿ ಎಂಟನೇ ತರಗತಿ ಪ್ರಶ್ನೆ ಪತ್ರಿಕೆಯನ್ನು ರೂಪಿಸಲಾಗಿದೆ.

ಐದನೇ ತರಗತಿ ಪ್ರಶ್ನೆ ಪತ್ರಿಕೆಯಲ್ಲಿ ಪ್ರಥಮ ಭಾಷೆ ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು ಪತ್ರಿಕೆ ಹಾಗೂ ದ್ವಿತೀಯ ಭಾಷೆ ಕನ್ನಡ, ಇಂಗ್ಲಿಷ್, ಗಣಿತ ಮತ್ತು ಪರಿಸರ ಅಧ್ಯಯನ ಪತ್ರಿಕೆಯನ್ನು ಕನ್ನಡ ಮತ್ತು ಇಂಗ್ಲಿಷ್ ಎರಡು ಮಾಧ್ಯಮಗಳಲ್ಲಿಯೂ ರೂಪಿಸಲಾಗಿದೆ.

8ನೇ ತರಗತಿ ಪ್ರಶ್ನೆ ಪತ್ರಿಕೆ ಪ್ರಥಮ ಭಾಷೆಯಲ್ಲಿ ಕನ್ನಡ, ಇಂಗ್ಲಿಷ್, ಮರಾಠಿ, ತಮಿಳು, ತೆಲುಗು, ಸಂಸ್ಕೃತ ದ್ವಿತೀಯ ಭಾಷೆಯಲ್ಲಿ ಕನ್ನಡ ಇಂಗ್ಲಿಷ್ ಹಿಂದಿ, ಸಂಸ್ಕೃತ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪತ್ರಿಕೆಯನ್ನು ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳಲ್ಲಿ ರೂಪಿಸಲಾಗಿದೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಮಾದರಿ ಪ್ರಶ್ನೆ ಪತ್ರಿಕೆಯನ್ನು https://kseab.karnataka.gov.in ವೆಬ್ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.


Spread the love

By admin