Spread the love

ಬೆಂಗಳೂರು: ಬಿಜೆಪಿ ಶಾಸಕ ನೆಹರು ಓಲೆಕಾರ್ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.

ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕ ನೆಹರು ಓಲೆಕಾರ್, ಅವರ ಇಬ್ಬರು ಪುತ್ರರಿಗೂ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಲಾಗಿದೆ.

 

ಶಾಸಕರ ವಿರುದ್ಧ ಸ್ವಜನ ಪಕ್ಷಪಾತ ನಡೆಸಿದ ಆರೋಪವಿದೆ. 50 ಲಕ್ಷ ರೂಪಾಯಿ ಮೊತ್ತದ ಕಾಮಗಾರಿ ಪುತ್ರರಿಗೇ ನೀಡಿದ ಆರೋಪ ಕೇಳಿ ಬಂದಿದೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಶಾಸಕ ಮತ್ತು ಪುತ್ರರಾದ ಮಂಜುನಾಥ ಓಲೆಕಾರ ಮತ್ತು ದೇವರಾಜ್ ಓಲೆಕಾರ್ ಅವರಿಗೂ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.

ಕಾಂಕ್ರೀಟ್ ರಸ್ತೆ ಸೇರಿದಂತೆ ಕೆಲವು ಕಾಮಗಾರಿ ನಡೆಸಿದ ಆರೋಪ ಕೇಳಿ ಬಂದಿದ್ದು, ಭ್ರಷ್ಟಾಚಾರ ತಡೆ ಕಾಯಿದೆಯಡಿ ಶಾಸಕ ಮತ್ತು ಪುತ್ರರಿಬ್ಬರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಮೂರು ವರ್ಷಕ್ಕಿಂತ ಕಡಿಮೆ ಶಿಕ್ಷೆಯಾದ ಹಿನ್ನೆಲೆಯಲ್ಲಿ ಜನ ಪ್ರತಿನಿಧಿಗಳ ನ್ಯಾಯಾಲಯದಿಂದಲೇ ಜಾಮೀನು ಮಂಜೂರು ಮಾಡಲಾಗಿದೆ.


Spread the love

By admin