Spread the love

ಬೆಂಗಳೂರು: ರಾಜ್ಯ ಸರ್ಕಾರ ತರಾತುರಿಯಲ್ಲಿ ಇಲಾಖಾವಾರು ಟೆಂಡರ್ ಕರೆಯುತ್ತಿದ್ದು, ಟೆಂಡರ್ ನಲ್ಲಿ ಭ್ರಷ್ಟಾಚಾರ ನಡೆಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿ.ಕೆ.ಶಿವಕುಮಾರ್, ರಾಜ್ಯ ಸರ್ಕಾರ ಟೆಂಡರ್ ಗೋಲ್ ಮಾಲ್ ನಲ್ಲಿ ತೊಡಗಿದೆ.

ವಿವಿಧ ಇಲಾಖೆಗಳಲ್ಲಿ ಟೆಂಡರ್ ಗೋಲ್ ಮಾಲ್ ನಡೆಯುತ್ತಿದೆ. 500 ಕೋಟಿ ಟೆಂಡರ್ 1000 ಕೋಟಿಗೆ ಮಾರಾಟ ಮಾಡುತ್ತಿದ್ದಾರೆ. ಸರ್ಕಾರದಲ್ಲಿರುವ ಶಾಸಕರೇ ನಮಗೆ ಈ ಬಗ್ಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ. ಗೂಳಿಹಟ್ಟಿ ಶೇಖರ್ ಕೂಡ ಈ ಬಗ್ಗೆ ಹೇಳುತ್ತಿದ್ದಾರೆ. ಬಿಜೆಪಿ ಸರ್ಕಾರ ಎಲ್ಲಾ ಇಲಾಖೆಗಳಿಂದ ಟೆಂಡರ್ ಮೂಲಕ ಹಣ ವಸೂಲಿ ಮಾಡಿ ಚುನಾವಣೆಗೆ ಹೋಗುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಜಲಸಂಪನ್ಮೂಲ, ಆರೋಗ್ಯ, ಇಂಧನ ಎಲ್ಲಾ ಇಲಾಖೆಗಳಲ್ಲಿ ತರಾತುರಿಯಲ್ಲಿ ಟೆಂಡರ್ ಕರೆಯಲಾಗುತ್ತಿದೆ. 7 ದಿನ ಮಾತ್ರ ಟೈಂ ಕೊಟ್ಟು ಗುತ್ತಿಗೆದಾರರನ್ನು ಸೆಟ್ ಮಾಡಲು ಶಾಸಕರಿಗೆ ಹಂಚಿ ಬಿಟ್ಟಿದ್ದಾರೆ. ಮಂತ್ರಿ ಮಾಡದೇ ಇರುವವರಿಗೆ 2-3 ಸಾವಿರ ಕೋಟಿ ಕೆಲಸ ಅಂತ ಟೆಂಡರ್ ಹಂಚಿಕೆ ಮಾಡುತ್ತಿದ್ದಾರೆ. ನಮಗೆ ಅದೇ ಶಾಸಕರು ಮಾಹಿತಿ ನೀಡಿದ್ದಾರೆ. ಈಗಾಗಲೆ ಸಾವಿರಾರು ಕೋಟಿ ಬಿಲ್ ಬಾಕಿ ಉಳಿಸಿಕೊಂಡು ಮತ್ತೆ ಹೊಸ ಟೆಂಡರ್ ಕರೆದಿದ್ದಾರೆ. ಯಾರು ಮೊದಲು ಹಣ ತಲುಪಿಸುತ್ತಾರೆ ಅವರಿಗೆ ಟೆಂಡರ್ ಹಂಚಿಕೆ ಮಾಡುತ್ತಿದ್ದಾರೆ. ಬಿಡಿಎ ಕಾರಂತ ಬಡಾವಣೆ ಇನ್ನೂ ಹಂಚಿಕೆಯೇ ಆಗಿಲ್ಲ, ಆದರೂ ಅದಕ್ಕೂ 3 ಸಾವಿರ ಕೋಟಿ ಟೆಂಡರ್ ಕರೆದಿದ್ದಾರೆ. ಯಾವುದೂ ಪಾರದರ್ಶ್ಕ


Spread the love

By admin