Spread the love

ಬೆಂಗಳೂರು: ರಾಜ್ಯ ಸರ್ಕಾರದ ಟೆಂಡರ್ ಗೋಲ್ ಮಾಲ್ ಬಗ್ಗೆ ಆರೋಪಿಸಿರುವ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕಾಂಗ್ರೆಸ್ ನಾಯಕರು ಹುಚ್ಚರು, ತೆಲೆ ತಿರುಕರು. ಅವರು ಮಾತ್ರ ಹೀಗೆ ಮಾತನಾಡಲು ಸಾಧ್ಯ ಎಂದು ಕಿಡಿಕಾರಿದ್ದಾರೆ.

 

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ತಲೆ ಸರಿ ಇದ್ದವರು ಯಾರೂ ಕೂಡ ಈರೀತಿ ಮಾತನಾಡಲ್ಲ, ಕಾಂಗ್ರೆಸ್ ನಾಯಕರು ಅಧಿಕಾರದ ಭ್ರಮೆಯಲ್ಲಿದ್ದಾರೆ. ನಾವು ಅಧಿಕಾರಕ್ಕೆ ಬಂದೇ ಬಿಟ್ಟಿದ್ದೇವೆ ಎಂಬ ಭ್ರಮೆಯಲ್ಲಿ ಹುಚ್ಚುಚ್ಚಾಗಿ ಮಾತನಾಡುತ್ತಿದ್ದಾರೆ. ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದರು.

ಇದೇ ವೇಳೆ ಅಧಿವೇಶನದಲ್ಲೇ ನಾನು ಇರಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ವಿಪಕ್ಷ ನಾಯಕರಾಗಿ ಈ ರೀತಿ ಹೇಳಿಕೆ ಗೌರವ ತರಲ್ಲ ಎಂದರು. ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ಸಲ್ಲದ ಆರೋಪ ಮಾಡಿದ್ದಾರೆ. ಅವರು ಈ ಮಟ್ಟಕ್ಕೆ ಇಳಿದಿರುವುದು ನನಗೆ ತುಂಬಾ ನೋವು ತಂದಿದೆ. ಇನ್ನಾದರೂ ಜವಾಬ್ದಾರಿಯುತವಾಗಿ ಮಾತನಾಡಲಿ. ಕಾಂಗ್ರೆಸ್ ಆರೋಪಕ್ಕೆ ನಾವು ಸದನದಲ್ಲಿ ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದರು.


Spread the love

By admin