Spread the love

ಬೆಂಗಳೂರು: ಬಿಜೆಪಿ ಶಾಸಕ ಸತೀಶ್ ರೆಡ್ದಿ ಹತ್ಯೆಗೆ ಸುಪಾರಿ ಪಡೆದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸಂಚು ರೂಪಿಸಿ, ಹಲವು ದಿನಗಳಿಂದ ಇಬ್ಬರು ಆರೋಪಿಗಳು ಶಾಸಕರನ್ನು ಹಿಂಬಾಲಿಸುತ್ತಿದ್ದರು ಎನ್ನಲಾಗಿದೆ.

ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ರೌಡಿ ಶೀಟರ್ ನಾಗನ ಸಹಚರರಾದ ಆಕಾಶ್, ಗಿರೀಶ್ ಎಂದು ಗುರುತಿಸಲಾಗಿದೆ. 2 ಕೊಟಿ ರೂಪಾಯಿಗೆ ಸುಪಾರಿ ಪಡೆದು ಫಾಲೋ ಮಾಡುತ್ತಿದ್ದರು ಎನ್ನಲಾಗಿದೆ


Spread the love

By admin