Spread the love

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 2000 ರೂಪಾಯಿ ಸಹಾಯ ಧನ ನೀಡುವುದಾಗಿ ಘೋಷಿಸಿರುವ ಬೆನ್ನಲೇ ಕಾಂಗ್ರೆಸ್ ಯೋಜನೆಗೆ ಸೆಡ್ದು ಹೊಡೆದಿರುವ ಸಿಎಂ ಬಸವರಾಜ್ ಬೊಮ್ಮಾಯಿ ಮಹಿಳೆಯರಿಗಾಗಿ ಗೃಹಿಣಿ ಶಕ್ತಿ ಯೋಜನೆ ಘೋಷಿಸಿದ್ದಾರೆ.

 

ರಾಜ್ಯದಲ್ಲಿ ಗೃಹಿಣಿ ಶಕ್ತಿ ಯೋಜನೆ ಜಾರಿಗೊಳಿಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. ಈ ಮೂಲಕ ಗೃಹಿಣಿಯರಿಗೆ 500 ರೂಪಾಯಿ ಸಹಾಯಧನ ನೀಡಲಾಗುವುದು ಎಂದು ಘೋಷಿಸಿದರು.


Spread the love

By admin