Spread the love

ವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 102 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ಒಂದೇ ದಿನದಲ್ಲಿ ಮೂವರು ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ 5,30,757 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ದೇಶದಲ್ಲಿ 1,835 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,51,910 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 7,850 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,206,319,397 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,15,409 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.


Spread the love