Spread the love

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ವಿಮಾನದಲ್ಲಿ ಬಂದು ಇಳಿಯುವ ಮೂಲಕ ಶಿವಮೊಗ್ಗದ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ.

ಇಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ ಈ ವಿಷಯ ತಿಳಿಸಿದ್ದು, ಫೆ.

27 ರಂದು ವಿಮಾನ ನಿಲ್ದಾಣದ ಉದ್ಘಾಟನೆ, ಜೊತೆಗೆ ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಮಾರ್ಗದ ಶಂಕುಸ್ಥಾಪನೆ ಕೂಡ ನೆರವೇರಲಿದೆ. ಅಂದು ಒಟ್ಟು 1789 ಕೋಟಿ ರೂ.ಗಳ ಕಾಮಗಾರಿ ಉದ್ಘಾಟನೆಗೊಳ್ಳಲಿದೆ. ಜೊತೆಗೆ 3377 ಕೋಟಿ ರೂ. ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಲಿದೆ ಎಂದರು.

ವಿಮಾನ ನಿಲ್ದಾಣದ ಉದ್ಘಾಟನೆಗೆ ಸಾರ್ವಜನಿಕರು ಕೂಡ ಪಾಲ್ಗೊಳ್ಳಲು ಅವಕಾಶ ಇದೆ. ಸೋಗಾನೆ ವಿಮಾನ ನಿಲ್ದಾಣದ ಪ್ರದೇಶದಲ್ಲಿಯೇ ಸಮಾರಂಭ ನಡೆಯಲಿದೆ. ಸುಮಾರು 2 ಲಕ್ಷ ಜನರು ಅಂದು ಸೇರುವ ನಿರೀಕ್ಷೆ ಇದೆ. ಅಲ್ಲಿಯೇ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ಕಲ್ಪಿಸಲಾಗುತ್ತಿದೆ. ಈ ಹಿಂದೆ ಕೇವಲ 94,359 ಮನೆಗಳಿಗೆ ಮಾತ್ರ ನಲ್ಲಿ ನೀರಿನ ಸಂಪರ್ಕ ಇತ್ತು. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ 134 ಕೋಟಿ ರೂ. ಕಾಮಗಾರಿ ಲೋಕಾರ್ಪಣೆ ಆಗಲಿದೆ. ಅದೇ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತನ್ನು ನರೇಂದ್ರ ಮೋದಿ ಅವರು ಶಿವಮೊಗ್ಗದಿಂದಲೇ ರೈತರ ಖಾತೆಗಳಿಗೆ ಜಮಾ ಮಾಡಲಿದ್ದಾರೆ ಎಂದರು.

Dailyhunt

Spread the love