Spread the love

ಬೆಂಗಳೂರು: ಕಾಂಗ್ರೆಸ್ ನಾಯಕರು ಆಧಾರವಿಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಸರ್ಕಾರ ಟೆಂಡರ್ ನಲ್ಲಿ ಗೋಲ್ ಮಾಲ್ ನಡೆಸಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸತ್ಯವಾಗಿದ್ದರೆ ವಿಧಾನಸಭೆಯಲ್ಲಿ ಯಾಕೆ ಮಾತನಾಡಿಲ್ಲ?

ಹೊರಗೆ ಹೋಗಿ ಆರೋಪ ಯಾಕೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ದಾಖಲೆ ಇಟ್ಟುಕೊಂಡು ಕಾಂಗ್ರೆಸ್ ನಾಯಕರು ದೂರು ನೀಡಲಿ. ಸುಮ್ಮನೇ ಗಾಳಿಯಲ್ಲಿ ಗುಂಡು ಹೊಡೆಯುವ ಹೇಳಿಕೆ ಸರಿಯಲ್ಲ ಎಂದು ಗುಡುಗಿದರು.


Spread the love

By admin