Spread the love

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರನ್ನು ಸೆಳೆಯುವ ಕಾರ್ಯ ಆರಂಭವಾಗಿದೆ. ಇದಕ್ಕೆ ಪೂರಕವೆಂಬಂತೆ ತಮ್ಮ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರನ್ನು ಹೊಂದಿರುವ ಒಕ್ಕಲಿಗರನ್ನು ಸೆಳೆಯಲು ಶಾಸಕ ಶರತ್ ಬಚ್ಚೇಗೌಡ ಮುಂದಾಗಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಶರತ್ ಬಚ್ಚೇಗೌಡ, ಈ ಹಿಂದೆ ತಾವು ನೀಡಿದ್ದ ಭರವಸೆಯಂತೆ ಒಕ್ಕಲಿಗರ ಸಂಘಕ್ಕೆ ಜಮೀನನ್ನು ಗಿಫ್ಟ್ ರೂಪದಲ್ಲಿ ನೀಡಿದ್ದಾರೆ.

 

ಈ ಹಿಂದೆ ಕೆಂಪೇಗೌಡ ಜಯಂತಿ ಸಂದರ್ಭದಲ್ಲಿ ಜಮೀನು ಕೊಡಿಸುವುದಾಗಿ ಶಾಸಕ ಶರತ್ ಬಚ್ಚೇಗೌಡ ಭರವಸೆ ನೀಡಿದ್ದು, ಅದರಂತೆ ಹೊಸಕೋಟೆ ತಾಲೂಕಿನ ಅರಳೆಮಾಕನಹಳ್ಳಿ ಬಳಿ 3 ಎಕರೆ 10 ಗುಂಟೆ ಜಮೀನನ್ನು ಒಕ್ಕಲಿಗ ಸಮುದಾಯ ಸಂಘದ ಹೆಸರಿಗೆ ಬರೆದುಕೊಟ್ಟಿದ್ದಾರೆ. ಇದರ ಮೌಲ್ಯ 6 ಕೋಟಿ ರೂಪಾಯಿಗಳು ಎಂದು ಹೇಳಲಾಗಿದೆ.


Spread the love

By admin