ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಜೆಡಿಎಸ್ ಮುಖಂಡ ವೈ.ಎಸ್.ವಿ. ದತ್ತಾ ಈಗ ಚೆಕ್ ಬೌನ್ಸ್ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸಿ.ಎಸ್. ಸೋಮೇಗೌಡ ಎಂಬವರಿಗೆ ನೀಡಿದ್ದ ಚೆಕ್ ಬೌನ್ಸ್ ಆದ ಹಿನ್ನೆಲೆಯಲ್ಲಿ ವೈ.ಎಸ್.ವಿ. ದತ್ತಾ ಅವರಿಗೆ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಲಾಗಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆದಿದ್ದು, ವೈ.ಎಸ್.ವಿ. ದತ್ತಾ ವಿಚಾರಣೆಗೆ ಗೈರು ಹಾಜರಾಗಿದ್ದ ಹಿನ್ನಲೆಯಲ್ಲಿ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಜೆ. ಪ್ರೀತ್ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.