ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಬೆಳಗಾವಿಯಲ್ಲಿ ಅತ್ಯಧಿಕ ಸೀಟು ಗೆಲ್ಲಬೇಕೆಂಬ ಕಾರಣಕ್ಕಾಗಿ ಬಿಜೆಪಿ ಭರ್ಜರಿ ತಯಾರಿ ನಡೆಸಿತ್ತು. ಇದರ ಮಧ್ಯೆ ತಲೆದೋರಿದ ಬಂಡಾಯ ಒಂದಷ್ಟು ಹಿನ್ನಡೆಯನ್ನುಂಟು ಮಾಡುವಂತೆ ಕಂಡುಬಂದಿತ್ತು.
ಈ ಹಿನ್ನೆಲೆಯಲ್ಲಿ ಇದೀಗ ಸ್ವತಃ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.
ಸಂತೋಷ್ ಅಖಾಡಕ್ಕಿಳಿದಿದ್ದು, ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಅವರು ಬಿಜೆಪಿಯ ಪ್ರಮುಖ ನಾಯಕರ ಜೊತೆ ಸರಣಿ ಸಭೆ ನಡೆಸುತ್ತಿದ್ದಾರೆ.
ಬೆಳಗಾವಿ ನಗರ, ಬೆಳಗಾವಿ ಗ್ರಾಮಾಂತರ ಹಾಗೂ ಚಿಕ್ಕೋಡಿ ಭಾಗದ ಬಿಜೆಪಿ ಪ್ರಮುಖರ ಜೊತೆ ಸಭೆ ನಡೆಸಿರುವ ಬಿ.ಎಲ್. ಸಂತೋಷ್, ಚುನಾವಣಾ ಗೆಲುವಿಗಾಗಿ ಹೆಣೆಯಬೇಕಾದ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಿದ್ದಾರೆ.