Spread the love

ಬೆಂಗಳೂರು: ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿ ಭರವಸೆಗಳನ್ನು ಇಂದೇ ಜಾರಿಗೆ ತರುವುದಾಗಿ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಮಾತನಾಡಿದ, ನೂತನ ಸಿಎಂ ಸಿದ್ದರಾಮಯ್ಯ, ಕರ್ನಾಟಕದ ಜನರ ಆಶೀರ್ವಾದದಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ.

ನಾಡಿನ ಎಲ್ಲ ಜನರಿಗೂ ಧನ್ಯವಾದ ಹೇಳುತ್ತೇನೆ. ರಾಜ್ಯದ ಜನರ ನಿರೀಕ್ಷೆಯಂತೆ ನಾವು ಆಡಳಿತ ನಡೆಸುತ್ತೇವೆ ಎಂದರು.

ಕರ್ನಾಟಕದ ಜನತೆಗೆ ನಾವು ನೀಡಿದ್ದ ಭರವಸೆಗಳನ್ನು ಈಡೇರಿಸುತ್ತೇವೆ. ಇಂದೇ 5 ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ. ನುಡಿದಂತೆ ನಡೆಯುತ್ತೇವೆ ಎಂದು ಹೇಳಿದರು.


Spread the love