Spread the love

ಮುಖ್ಯಮಂತ್ರಿಯಾದ ಬಳಿಕ ಕೆಲವು ವಿಶೇಷ ಸುದ್ಧಿಗಳಿದ ಜನರ ಮೆಚ್ಚುಗೆ ಪಡೆಯುತ್ತಿರುವ ಸಿಎಂ ಸಿದ್ದರಾಮಯ್ಯ ನವರು  ಶಿಷ್ಟಾಚಾರದ ಪ್ರಕಾರ ತಮಗೆ ಸೇವೆಯಲ್ಲಿದ್ದ ಜೀರೊ ಟ್ರಾಫಿಕ್‌ ಸೌಲಭ್ಯವನ್ನು ತ್ಯಜಿಸಿದ್ದು ಈಗ ಸಾರ್ವಜನಿಕ , ಅಭಿಮಾನಿಗಳು , ಕಾರ್ಯಕರ್ತರು ಸನ್ಮಾನದ ರೂಪದಲ್ಲಿ ನೀಡಲಾಗುವ ಹಾರ-ತರಾಯಿ ಮತ್ತು ಶಲ್ಯಗಳನ್ನೂ ತಿರಸ್ಕರಿಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ತಮ್ಮ ಟ್ವೀಟರ್ ಖಾತೆಯಿಂದ ಇದಕ್ಕೆ ಸಂಬಂಧಪಟ್ಟಂತ ವಿಷಯಗಳನ್ನು ಬರೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು , ‘ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ’ ಎಂದು ಹೇಳಿದ್ದಾರೆ.

‘ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಇದು ಅನ್ವಯ. ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು’ ಎಂದು ಅವರು ತಿಳಿಸಿದ್ದಾರೆ.

ಈ ಮೊದಲು ಟ್ವೀಟ್‌ ಮಾಡಿದ್ದ ಸಿದ್ದರಾಮಯ್ಯ ಜೀರೊ ಟ್ರಾಫಿಕ್‌ ತ್ಯಜಿಸಿರುವುದಾಗಿ ಹೇಳಿದ್ದರು. ‘ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗಿ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ’ ಎಂದು ಹೇಳಿದ್ದರು.


Spread the love