Spread the love

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಬಿಜೆಪಿ ನಾಯಕರಿಗೆ ಸಂಕಷ್ಟ ಎದುರಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಾದ ಹಗರಣಗಳ ಬಗ್ಗೆ ತನಿಖೆ ನಡೆಸಲು ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸಿದೆ.

ಈ ಬಗ್ಗೆ ನೂತನ ಸಚಿವ ಎಂ.ಬಿ. ಪಾಟೀಲ್ ಮಾಹಿತಿ ನೀಡಿದ್ದು, ಪಿ ಎಸ್ ಐ ಹಗರಣ, ನೀರಾವರಿ ಇಲಾಖೆ, ಗುತ್ತಿಗೆದಾರರ ಕೇಸ್ ಸೇರಿದಂತೆ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

 

ಹಗರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳೇ ಇರಲಿ, ಸಚಿವರೇ ಇರಲಿ ಯಾರೇ ಆಗಿರಲಿ ಪ್ರಕರಣದ ಬಗ್ಗೆ ತನಿಖೆ ನಡೆಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸುತ್ತೇವೆ ಎಂದು ತಿಳಿಸಿದ್ದಾರೆ.


Spread the love