Spread the love

ಶ್ರೀಲಂಕಾ ಮತ್ತು ಪಾಕಿಸ್ತಾನದ ಜಂಟಿ ಆತಿಥ್ಯದಲ್ಲಿ 2023ರ ಸಾಲಿನ ಏಷ್ಯಾ ಕಪ್‌ ಏಕದಿನ ಕ್ರಿಕೆಟ್‌ ಟೂರ್ನಿ ನಡೆಯಲಿದೆ. ಸಂಪೂರ್ಣವಾಗಿ ಪಾಕಿಸ್ತಾನದ ಆತಿಥ್ಯದಲ್ಲಿ ಈ ಟೂರ್ನಿ ನಡೆಯಬೇಕಿತ್ತು. ಆದರೆ, ಟೀಮ್ ಇಂಡಿಯಾ ಪಾಕಿಸ್ತಾನ ಪ್ರವಾಸ ಕೈಗೊಳ್ಳುವುದಿಲ್ಲ ಎಂದು ಪಟ್ಟು ಹಿಡಿದ ಕಾರಣಕ್ಕೆ ಆತಿಥ್ಯವನ್ನು ಶ್ರೀಲಂಕಾಕ್ಕೆ ಹಂಚಲಾಗಿದೆ. ಹೀಗಾಗಿ ಭಾರತ ತಂಡ ತನ್ನೆಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಲಿದೆ.

ಆಗಸ್ಟ್‌ 30ರಿಂದ ಸೆಪ್ಟೆಂಬರ್‌ 17ರವರೆಗೆ ನಡೆಯಲಿರುವ ಏಷ್ಯಾ ಕಪ್‌ ಟೂರ್ನಿಯು ಇದೇ ವರ್ಷ ಭಾರತದ ಆತಿಥ್ಯದಲ್ಲಿ ನಡೆಯಲಿರು ಐಸಿಸಿ ಏಕದಿನ ಕ್ರಿಕೆಟ್‌ವಿಶ್ವಕಪ್‌ ಟೂರ್ನಿಗೆ ಸಮರಾಭ್ಯಾಸದ ವೇದಿಕೆ ಕೂಡ ಆಗಿದೆ. ಉದ್ಘಾಟನಾ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ನೇಪಾಳ ತಂಡಗಳು ಆಗಸ್ಟ್‌ 30ರಂದು ಮುಖಾಮುಖಿ ಆಗಲಿವೆ. ಅಂದಹಾಗೆ ಇಡೀ ಕ್ರಿಕೆಟ್‌ ಜಗತ್ತು ಕಾತುರದಿಂದ ಎದುರು ನೋಡುತ್ತಿರುವ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಸೆಪ್ಟೆಂಬರ್‌ 2ರಂದು ಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್‌ 2ರಂದು ನಡೆಯಲಿದೆ.

ಉಚಿತ ಲೈವ್‌ ಸ್ಟ್ರೀಮಿಂಗ್ ಸಿಗಲಿದೆ
ಏಷ್ಯಾ ಕಪ್‌ 2023 ಟೂರ್ನಿಯ ಟೆಲಿವಿಷನ್‌ ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್‌ ನೆಟ್‌ವರ್ಕ್‌ ವಾಹಿನಿಯಲ್ಲಿ ಲಭ್ಯವಾಗಲಿದ್ದು, ಸ್ಮಾರ್ಟ್‌ ಫೋನ್‌ ಬಳಕೆದಾರರು ಡಿಸ್ನಿ ಪ್ಲಸ್‌ ಹಾಟ್‌ ಸ್ಟಾರ್‌ ಅಪ್ಲಿಕೇಷನ್‌ ಮೂಲಕ ಲೈವ್‌ ಸ್ಟ್ರೀಮಿಂಗ್‌ ಸಂಪೂರ್ಣ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.


Spread the love