2023ರ ಸಾಲಿನ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಕಿವೀಸ್ ಪಡೆಯನ್ನು ಮುನ್ನಡೆಸಲಿದ್ದಾರೆ. ಕ್ರಿಕೆಟ್ ನ್ಯೂಜಿಲೆಂಡ್ ತನ್ನ 15 ಆಟಗಾರರ ವಿಶ್ವಕಪ್ ತಂಡವನ್ನು ಸೋಮವಾರ (ಸೆ.11) ಪ್ರಕಟ ಮಾಡಿದ್ದು, ತಂಡದಲ್ಲಿ ಯುವ ಆಲ್‌ರೌಂಡರ್ ರಚಿನ್ ರವೀಂದ್ರ ಸ್ಥಾನ ಪಡೆದಿದ್ದಾರೆ. ಕ್ಯಾಪ್ಟನ್ ಕೇನ್ ವಿಲಿಯಮ್ಸನ್ ಬರೋಬ್ಬರಿ 5 ತಿಂಗಳ ಬಳಿಕ ತಂಡಕ್ಕೆ ಹಿಂದಿರುಗಿದ್ದಾರೆ.
ಗುಜರಾತ್ ಟೈಟನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯದಲ್ಲಿ ಬೌಂಡರಿ ಗೆರೆ ಬಳಿ ಸಿಕ್ಸರ್ ತಡೆಯುವ ಪ್ರಯತ್ನದಲ್ಲಿ ಕೇನ್ ತಮ್ಮ ಮಂಡಿಗೆ ಬಲವಾದ ಪೆಟ್ಟು ಮಾಡಿಕೊಂಡರು. ಬಳಿಕ ಗಾಯದ ಸಮಸ್ಯೆ ನಿವಾರಣೆಗೆ ಶಸ್ತ್ರಚಿಕಿತ್ಸೆಗೆ ಒಳಪಡಬೇಕಾಯಿತು. ಇದೀಗ ಕೇನ್ ಸಂಪೂರ್ಣ ಚೇತರಿಸಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ ಎಂಬುದನ್ನು ಮನಗಂಡು ಕ್ರಿಕೆಟ್ ನ್ಯೂಜಿಲೆಂಡ್ ತನ್ನ ವಿಶ್ವಕಪ್ ತಂಡವನ್ನು ಹೆಸರಿಸಿದೆ.
ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ಆಯೋಜನೆ ಆಗಲಿದೆ. ಅಕ್ಟೋಬರ್ 5ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಯೋಜನೆ ಆಗಲಿರುವ ಉದ್ಘಾಟನಾ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಡಿಫೆಂಡಿಂಗ್ ಚಾಂಪಿಯನ್ಸ್ ಇಂಗ್ಲೆಂಡ್ ಎದುರು ಪೈಪೋಟಿ ನಡೆಸಲಿದೆ
ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ನ್ಯೂಜಿಲೆಂಡ್ ತಂಡ ಹೀಗಿದೆ
ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೋನ್ ಕಾನ್ವೇ, ಲಾಕಿ ಫರ್ಗ್ಯೂಸನ್, ಮ್ಯಾಟ್ ಹೆನ್ರಿ, ಟಾಮ್ ಲೇಥಮ್ (ವಿಕೆಟ್‌ಕೀಪರ್, ಉಪನಾಯಕ), ಡ್ಯಾರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಢಿ, ಟಿಮ್ ಸೌಥೀ ಮತ್ತು ವಿಲ್ ಯಂಗ್.