Spread the love

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ಕಿಚ್ಚು ಮುಂದುವರಿದಿದೆ. ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ವಿಚಾರಕ್ಕೆ ಸಂಬಂಧಿಸಿ ಇಂದು ಮಂಡ್ಯ ನಗರ ಬಂದ್​ಗೆ ರೈತ ಹಿತರಕ್ಷಣಾ ಸಮಿತಿ ಕರೆ ಕೊಟ್ಟಿದ್ದು ಬೆಳಗ್ಗೆ 8 ಗಂಟೆಯಿಂದ ಸಂಜೆ 6ರವರೆಗೆ ಮಂಡ್ಯ ನಗರ ಬಂದ್ ಆಗಲಿದೆ. ಆಟೋ, ಖಾಸಗಿ ಬಸ್, ಶಾಲಾ ಕಾಲೇಜುಗಳ ಬಂದ್​ಗೂ ಮನವಿ ಮಾಡಲಾಗಿದೆ.

ಮಂಡ್ಯ ಬಂದ್‌ ಹೋರಾಟ ಬೆಂಬಲಿಸಿ ಬೆಂಗಳುರಿನ ಮಲ್ಲೇಶ್ವರಂನಲ್ಲೂ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ . ಅದು ಅಲ್ಲದೇ  ಎಲೆಕ್ಟ್ರಾನಿಕ್​ ಸಿಟಿಯಲ್ಲಿ ಕರವೇ ಪ್ರತಿಭಟನೆ ನಡೆಸುತ್ತಿದೆ. ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮಿಳುನಾಡು ಸರ್ಕಾರದ ಭೂತ ದಹನ ಮಾಡಿ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ.


Spread the love