ಬೆಂಗಳೂರು: ಬೆಂಗಳೂರು ಬಂದ್ ಎಫಕ್ಟ್ ರೋಗಿಗಳಿಗೂ ತಟ್ಟಿದೆ. ಶಿವಮೊಗ್ಗದ ಮಾನಸ ಆಸ್ಪತ್ರೆಗೆ ಹೋಗಲು ಆಂಧ್ರಪ್ರದೇಶದಿಂದ ಮೆಜೆಸ್ಟಿಕ್ಗೆ ಪ್ರಯಾಣಿಕರು ಬಂದಿದ್ದಾರೆ. ಇಲ್ಲಿಂದ ಚಿಕಿತ್ಸೆಗಾಗಿ ಶಿವಮೊಗ್ಗ ಹೋಗಲು ನಿರ್ಧರಿಸಿದ್ದಾರೆ. ಆದರೆ ಪ್ರಯಾಣಿಕ ಸಂಖ್ಯೆ ಇಲ್ಲ ಅಂತ ಕೆಎಸ್ಆರ್ಟಿಸಿ ಶಿವಮೊಗ್ಗಕ್ಕೆ ಬಸ್ ಬಿಡುತ್ತಿಲ್ಲ. ಹೀಗಾಗಿ ರೋಗಿಗಳು ಪರದಾಡುತ್ತಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸುವುತ್ತಿರುವುದನ್ನು ವಿರೋಧಿಸಿ ಬೆಂಗಳೂರು ಬಂದ್ಗೆ ಕರೆ ಕೊಟ್ಟಿದ್ದು, ಕೆ.ಆರ್.ಮಾರ್ಕೆಟ್ ವ್ಯಾಪಾರಿಗಳು ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಬಂದ್ ದಿಕ್ಕು ತಪ್ಪಿಸುವ ಕೆಲಸವಾಗಬಾರದು. ಜಲ್ಲಿಕಟ್ಟು ಆದಾಗ ತಮಿಳುನಾಡು ಪೋಲಿಸರು ಸಹಕಾರ ನೀಡಿದರು. ಇಲ್ಲಿ ಪೋಲಿಸರು ಪ್ರತಿಭಟನೆ ಮಾಡುವವರಿಗೆ ಕೆಲವೊಂದು ಸಮಸ್ಯೆ ಆಗುತ್ತಿದೆ ಎಂದು ಗೊತ್ತಾಗಿದೆ. ಸದ್ಯದವರೆಗೂ ಬಂದ್ ಯಶಸ್ವಿಯಾಗಿದೆ. ಎಲ್ಲರೂ ಬೆಂಬಲ ನೀಡಿದ್ದಾರೆ. 144 ಸೆಕ್ಷನ್ ಹಾಕಬಾರದಿತ್ತು. ನಮ್ಮ ಹೋರಾಟ, ಚಳುವಳಿ ಇರಲಿದೆ. ಈಗ ಟೌನ್‌ಹಾಲ್‌ಗೆ ಹೋಗುತ್ತಿದ್ದೇವೆ. ಇಲ್ಲಿ ಏನೇ ನಡೆದರೂ ಇಡೀ ರಾಜ್ಯಕ್ಕೆ ಸಂದೇಶ ಹೋಗುತ್ತದೆ. ಪೋಲಿಸರು ಎಚ್ಚರಿಕೆಯಿಂದ ಇರಬೇಕು ಎಂದು ಕುರುಬೂರು ಶಾಂತಕುಮಾರ್ ಹೇಳಿದರು.