ಬೆಂಗಳೂರು: ಲೋಕಸಭಾ ಚುನಾವಣೆಗಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿ ಜೆಡಿಎಸ್ ಬಿಜೆಪಿಯಲ್ಲಿ ವಿಲೀನ ಆದರೂ ಅಚ್ಚರಿಪಡಬೇಕಿಲ್ಲ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಚುನಾವಣೆ ವೇಳೆಗೆ JDS ಬಿಜೆಪಿಯಲ್ಲಿ ವಿಲೀನವಾದರೂ ಅಚ್ಚರಿಪಡಬೇಕಿಲ್ಲ. ಆದರೆ ಇದಕ್ಕೆ ಜೆಡಿಎಸ್ ವರಿಷ್ಠ ದೇವೇಗೌಡರು ಒಪ್ಪಿಗೆ ಇಲ್ಲ.
ಹೀಗಾಗಿ ಚುನಾವಣೆಗೆ ಮಾತ್ರ ಜೆಡಿಎಸ್-ಬಿಜೆಪಿ ಮೈತ್ರಿ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷ ಬಿಜೆಪಿಯಲ್ಲಿ ವಿಲೀನವಾಗಬಹುದು. ಕುಮಾರಸ್ವಾಮಿ, ಜೆಡಿಎಸ್ ನಾಯಕರು ಬಿಜೆಪಿಯಲ್ಲಿ ವಿಲೀನವಾಗಬಹುದು ಎಂದರು.