Spread the love

ಶಿವಮೊಗ್ಗ: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಗಲಾಟೆ ಸಂಬಂಧ ಪೊಲೀಸರು ಈವರೆಗೆ 24 FIR​ ದಾಖಲಿಸಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಗಲಾಟೆ ಸಂದರ್ಭದಲ್ಲಿ ಗಂಭೀರ ಆಗಿಲ್ಲ, ಸಣ್ಣಪುಟ್ಟ ಗಾಯಗಳಾಗಿವೆ.

ಈ ಘಟನೆಯಲ್ಲಿ ಯಾರೇ ಭಾಗಿಯಾಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ. ಪ್ರಕರಣ ಸಂಬಂಧ ಸಂಪೂರ್ಣ ಮಾಹಿತಿ ಕಲೆ ಹಾಕುತ್ತೇವೆ. ಗಲಾಟೆಯಲ್ಲಿ ಭಾಗಿಯಾದ ಯಾರನ್ನೂ ಬಿಡಲ್ಲ. ಕಾನೂನು ಎಲ್ಲರಿಗೂ ಒಂದೇ, ಎಲ್ಲರಿಗೂ ಒಂದೇ ರೀತಿ ಶಿಕ್ಷೆ ಆಗುತ್ತದೆ ಎಂದರು. ಇನ್ನೂ ಈದ್ ಮಿಲಾದ್ ಮೆರವಣಿಗೆಯಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ರಾಗಿಗುಡ್ಡ ಶಾಂತಿ ನಗರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಶಿವಮೊಗ್ಗ ನಗರದಾದ್ಯಂತ 144 ಸೆಕ್ಷನ್ ಮುಂದುವರಿದಿದೆ.

 


Spread the love