Spread the love

ಮೈಸೂರು;- ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಪ್ರಾಧಿಕಾರ ಹೊರಡಿಸಿರುವ ಆದೇಶ ಕುರಿತಾಗಿ DCM ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ರಾಜ್ಯದ ಡ್ಯಾಮ್​ಗಳಲ್ಲಿ ಎಷ್ಟು ಟಿಎಂಸಿ ನೀರಿದೆ ಎಂದು ದಾಖಲೆ ಪಡೆದಿದ್ದಾರೆ. ತಮಿಳುನಾಡಿನ ಡ್ಯಾಮ್​ನಲ್ಲಿ ಎಷ್ಟು ನೀರಿದೆ ಎಂದು ಮಾಹಿತಿ ಪಡೆದಿದ್ದಾರೆ. ಕರ್ನಾಟಕ ಜಲಾಶಯಗಳಿಗೆ 7ರಿಂದ 10 ಸಾವಿರ ಕ್ಯೂಸೆಕ್ ಒಳಹರಿವು ಇದೆ. ಹಾಗಾಗಿ ನಮ್ಮ ರಾಜ್ಯದ ರೈತರ ರಕ್ಷಣೆಗೆ ಎಲ್ಲಾ ವ್ಯವಸ್ಥೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಬಿಳಿಗುಂಡ್ಲು ಜಲಮಾಪನ ಕೇಂದ್ರಕ್ಕೆ 2 ದಿನ ಕಡಿಮೆ ನೀರು ಹೋಗಿದೆ. ಬೆಂಗಳೂರಿನಲ್ಲಿ ಮಳೆಯಾದ ಕಾರಣ ಅದು ಬ್ಯಾಲೆನ್ಸ್ ಆಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಮನದಟ್ಟು ಮಾಡಿಕೊಟ್ಟಿದ್ದೇವೆ. ಏನೇ ಆದೇಶ ಬಂದರೂ ನಮ್ಮ ರೈತರ ಹಿತ ಕಾಯುತ್ತೇವೆ ಎಂದಿದ್ದಾರೆ.

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ 192 ತಾಲೂಕು ಬರ ಘೋಷಣೆ ಮಾಡಲಾಗಿದೆ. ಮಳೆ ಬಾರದ ಕಾರಣ ಬರ ಬಂದಿದೆ. ಕಳೆದ ಬಾರಿಗಿಂತ ಅರ್ಧದಷ್ಟು ಮಳೆ ಬಂದಿದೆ. ಈಗಾಗಿ ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ. ಆದರು ಸರ್ಕಾರ ಇದನ್ನ ಬ್ಯಾಲೆನ್ಸ್ ಮಾಡುತ್ತೆ ಎಂದರು.


Spread the love