Spread the love

ಬೆಂಗಳೂರು;- ಮತ್ತೆ 21 ತಾಲೂಕುಗಳಲ್ಲಿ ಬರ ಎಂದು ಸಿಎಂ ಸಿದ್ದರಾಮಯ್ಯ ಇಂದು ಅಧಿಕೃತ ಘೋಷಣೆ ಮಾಡಿದ್ದಾರೆ.

ರಾಜ್ಯದ 236 ತಾಲೂಕುಗಳ ಪೈಕಿ 161 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕು ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತವೆಂದು ಒಟ್ಟು 195 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿತ್ತು. ಈ ಪೈಕಿ 22 ಸಾಧಾರಣ ಬರಪೀಡಿತ ತಾಲೂಕುಗಳಲ್ಲಿ ಮತ್ತೊಮ್ಮೆ ಬೆಳೆ ಹಾನಿ ಸಮೀಕ್ಷೆ ನಡೆಸಿ 11 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕು ಹಾಗೂ 11 ಸಾಧಾರಣ ಬರಪೀಡಿತ ತಾಲೂಕುಗಳೆಂದು ಅಧಿಕೃತವಾಗಿ ಘೋಷಿಸಿದೆ. ಒಟ್ಟು 216 ಬರ ಪೀಡಿತ ತಾಲೂಕುಗಳಲ್ಲಿ ಮುಂದಿನ ಆರು ತಿಂಗಳ ಬರ ನಿರ್ವಹಣೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಸೂಚನೆ ನೀಡಿದೆ.

ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ 2020ರ ಮಾರ್ಗಸೂಚಿಯಂತೆ 189 ತೀವ್ರ ಬರಪೀಡಿತ ತಾಲೂಕು ಹಾಗೂ 27 ಸಾಧಾರಣ ಬರಪೀಡಿತ ತಾಲೂಕುಗಳು ಒಳಗೊಂಡಂತೆ ಒಟ್ಟು 216 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿ ಆದೇಶ ಹೊರಡಿಸಿದ್ದಾರೆ.

Spread the love