ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಶ್ವವಿಖ್ಯಾತ ದಸರಾಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಹಂಸಲೇಖ, ಪೂಜ್ಯ ಕನ್ನಡಕ್ಕೆ, ಪೂಜ್ಯ ಕನ್ನಡಿಗರಿಗೆ ನನ್ನ ನಮನ. ಈ ಅವಕಾಶಕ್ಕಾಗಿ ನಾನು ಸಾವಿರ ಮೆಟ್ಟಿಲು ಹತ್ತಿ ಬಂದಿದ್ದೇನೆ ಎಂದರು. ಯಾರು ಯಾರನ್ನು ನೆನೆಯಾನಾ ? ಯಾರು ಯಾರನ್ನು ನೆನೆಯಲಿ, ಕನ್ನಡ ದೀಪ, ಸಮೃದ್ದಿ ಅಭಿವೃದ್ಧಿ ಶಾಂತಿ ಸಮೃದ್ದಿಯ ನನ್ನ ಮಾತಿನ ಪರಿವಿಧಿ. ಪೂಜ್ಯ ಕನ್ನಡಿಗರಿಗೆ ಪೂಜ್ಯ ಕನ್ನಡಕ್ಕೆ ಈ ದೇವಾಲಯ ಪ್ರೇಮಾಲಯಕ್ಕೆ ಸಾವಿರದ ಶರಣುಗಳು.
ಐದಶ ಕರ್ನಾಕದ ಏಕೀಕರಣಕ್ಕೆ ಈಗ ಐದಶ ಅಂದರೆ ಐವತ್ತು. ಏಕೀಕರಣಕ್ಕೆ ಐವತ್ತು ತುಂಬಿದೆ ಕರ್ನಾಟಕ ಐದಶ ಅಂತಾ ಕರೆಯೋಣ. ಕರ್ನಾಟಕ ಐದಶ ಕರ್ನಾಟಕದ ಐದಶದ ಜೊತೆಗೆ ನನ್ನ ಕಲಾ ಕಾಯಕಲ್ಪಕ್ಕೂ 50 ವರ್ಷ. ಈ ನನ್ನ ಐದಶದಲ್ಲಿ ಸಿಕ್ಕಿದ ಈ ಅವಕಾಶ ಇದು ಬಹಳ ಬೆಲೆ ಬಾಳುವಂತಹದ್ದು. ಈ ಅವಕಾಶಕ್ಕಾಗಿ ನಿರಾಯಾಸವಾಗಿ ಬಂದಿಲ್ಲ. ಇದಕ್ಕಾಗಿ ಸಾವಿರ ಮೆಟ್ಟಿಲು ಹಾಗೂ ಸಾವಿರಾರು ಮೆಟ್ಟಿಲು ಹತ್ತಿ ಬಂದಿದ್ದೇನೆ. ಈ ಅವಕಾಶಕ್ಕೆ ಯಾರು ಕಾರಣ ಯಾರನ್ನು ಮೊದಲು ನೆನೆಯಲಿ.
ಅಪ್ಪ ಗೋವಿಂದರಾಜ ಮಾನೆ ಅಮ್ಮ ರಾಜಮ್ಮ ಗುರು ನೀಲಕಂಠ ಅಥವಾ ನಾದ ನಾಟಕರಂಗ ಸರ್ಕಾರ ಅಥವಾ ಸಂವಿಧಾನವನ್ನೇ, ಸಂವಿಧಾನದ ದನಿ ಸಿದ್ದರಾಮಯ್ಯ ಅವರನ್ನೇ ? ಡಿಸಿಎಂ ಪ್ರಬಲ ಶಕ್ತಿ ಸಂಘಟಕ ಡಿ ಕೆ ಶಿವಕುಮಾರ್, ನನ್ನ ಹೆಸರು ಸೂಚಿಸಿದ ಡಾ ಎಚ್ ಸಿ ಮಹದೇವಪ್ಪ ಅವರನ್ನೇ, ನನ್ನ ಹೆಂಡತಿ ಮಕ್ಕಳು ಅಭಿಮಾನಿಗಳನ್ನೇ ? ಅಥವಾ ಭೂಮಿ ತಾಯಿಯನ್ನೇ ಯಾರು ಯಾರು ಅಂತಾ ಹೇಳಲಿ ಎಂದರು.