ನವದೆಹಲಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ವಿಜೇತೆ ಹಾಗೂ ಮೂರು ಬಾರಿಯ ವಿಶ್ವ ಚಾಂಪಿಯನ್ ಗ್ರ್ಯಾಪ್ಲರ್ ಜಪಾನ್‌ನ ರಿಸಾಕೊ ಕವಾಯ್ ಅವರು ಡಬ್ಲ್ಯುಎಫ್‌ಐ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಹೋರಾಟ ನಡೆಸುತ್ತಿರುವ ಭಾರತೀಯ ಕುಸ್ತಿಪಟುಗಳ ಬೆಂಬಲಕ್ಕೆ ನಿಂತಿದ್ದಾರೆ.
ಟೋಕಿಯೊದಲ್ಲಿ 57 ಕೆಜಿ ಮಹಿಳಾ ಫ್ರೀಸ್ಟೈಲ್ ಚಿನ್ನ ಗೆದ್ದ ಕವಾಯ್, ಪ್ರತಿಭಟನಾನಿರತ ಭಾರತೀಯ ಕುಸ್ತಿಪಟುಗಳಿಗೆ ಬೆಂಬಲವಾಗಿ ಬಂದ ಮೊದಲ ಉನ್ನತ ಮಟ್ಟದ ಅಂತರರಾಷ್ಟ್ರೀಯ ಕುಸ್ತಿಪಟು.
ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ಮಹಿಳಾ ಅಥ್ಲೀಟ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ವಿನೇಶ್ ಫೋಗಟ್, ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಭಾರತದ ಪ್ರಮುಖರು ಇಲ್ಲಿನ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕುಸ್ತಿಪಟುಗಳ ಪ್ರತಿಭಟನೆಯ ಕುರಿತು ಬಿಬಿಸಿ ನ್ಯೂಸ್ ವೀಡಿಯೋವನ್ನು ರಿಟ್ವೀಟ್ ಮಾಡುವ ಮೂಲಕ ಕವಾಯಿ ಅವರು “ಭಾರತೀಯ ಕ್ರೀಡಾಪಟುಗಳು ಮನಸ್ಸಿನ ಶಾಂತಿಯಿಂದ