Spread the love

ಬೆಂಗಳೂರು : ಇಂಡಿಯಾ’ ಬದಲು ದೇಶದ ಹೆಸರನ್ನು `ರಿಪಬ್ಲಿಕ್ ಆಫ್ ಭಾರತ್’ (Republic Of Bharat) ಎಂದು ಬದಲಾಯಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದ ಬೆನ್ನಲ್ಲೇ ಈಗ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ (Virender Sehwag) ಅವರು ಬಿಸಿಸಿಐಗೆ ಆಗ್ರಹವೊಂದನ್ನು ಮಾಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸೆಹ್ವಾಗ್, ಟೀಂ ಇಂಡಿಯಾದ ಜೆರ್ಸಿಯಲ್ಲಿ ಹೆಸರು ಬದಲಾವಣೆ ಮಾಡಿ. ಟೀಂ ಇಂಡಿಯಾ ಬದಲಿಗೆ ಟೀಂ ಭಾರತ್ ಅಂತ ಜೆರ್ಸಿ ಬದಲಿಸುವಂತೆ ಬಿಸಿಸಿಐಗೆ ಮಾಜಿ ಕ್ರಿಕೆಟಿಗ ಒತ್ತಾಯಿಸಿದ್ದಾರೆ.

ಅಲ್ಲದೆ ಈ ವಿಶ್ವಕಪ್‍ನಲ್ಲಿ ನಾವು ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಬುಮ್ರಾ, ರವೀಂದ್ರ ಜಡೇಜಾ ಅವರನ್ನು ಹುರಿದುಂಬಿಸುತ್ತೇವೆ. ನಮ್ಮ ಹೃದಯದಲ್ಲಿ ಭಾರತೀಯರು ಎಂಬುದೇ ಇರಲಿ ಮತ್ತು ಆಟಗಾರರು ‘ಭಾರತ್’ ಇರುವ ಜೆರ್ಸಿಯನ್ನು ಧರಿಸುತ್ತಾರೆ ಎಂದು ತಿಳಿಸಿದ್ದಾರೆ.

ಇತ್ತ Board of Control for Cricket in India (BCCI) ಬದಲು Board of Control for Cricket in BHARAT (BCCB) ಎಂಬುದಾಗಿ ಬದಲಾಯಿಸಬೇಕು ಎಂಬ ಕೂಗು ಕೂಡ ಎದ್ದಿದೆ. ಒಟ್ಟಿನಲ್ಲಿ `ಇಂಡಿಯಾ’ ಬದಲು ದೇಶದ ಹೆಸರನ್ನು `ರಿಪಬ್ಲಿಕ್ ಆಫ್ ಭಾರತ್’ ಎಂದು ಕರೆಯಬೇಕು ಎಂಬುದಾಗಿ ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಲಹೆ ನೀಡಿದ್ದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ನಿರ್ಣಯಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ. ಜಿ20 ಶೃಂಗಸಭೆಗೆ ರಾಷ್ಟ್ರಪತಿಗಳು ಗಣ್ಯರಿಗೆ ನೀಡಿದ ಆಹ್ವಾನ ಪತ್ರಿಕೆಯಲ್ಲಿ `ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲಿಗೆ `ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಉಲ್ಲೇಖಿಸಿದ ನಂತರ ಈ ಚರ್ಚೆ ಹುಟ್ಟಿಕೊಂಡಿದೆ.

Spread the love