Spread the love

ಹುಬ್ಬಳ್ಳಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗೌರವ ಧನ ಹೆಚ್ಚಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್’ನ ಹುಬ್ಬಳ್ಳಿ ತಾಲ್ಲೂಕು ಸಮಿತಿ ಸದಸ್ಯರುನಗರದಲ್ಲಿ ಪ್ರತಿಭಟನೆ ನಡೆಸಿದರು. ಮಿನಿ ವಿಧಾನಸೌಧದ ಎದುರು ಪ್ರತಿಭಟನಾ ಧರಣಿ ನಡೆಸಿ ತಹಶೀಲ್ದಾರ್’ಗೆ ಮನವಿ ಸಲ್ಲಿಸಿದರು. ಅಂಗನವಾಡಿ ಕಾರ್ಯಕರ್ತೆಯರಿಗೆ ₹15ಸಾವಿರ, ಸಹಾಯಕಿಯರಿಗೆ ₹10 ಸಾವಿರ ಗೌರವಧನ ಹೆಚ್ಚಿಸಬೇಕು.

ನಿವೃತ್ತರಿಗೆ ₹3 ಲಕ್ಷ ಆರ್ಥಿಕ ನೆರವು ನೀಡಬೇಕು. ಅಂಗನವಾಡಿ ವ್ಯವಸ್ಥೆ ವಿರುದ್ಧವಾಗಿರುವ ಶಿಶುಪಾಲನಾ ಕೇಂದ್ರ ಮತ್ತು ಪೂರ್ವ ಪ್ರಾಥಮಿಕ ತರಗತಿ ಆರಂಭಿಸಲು ಸರ್ಕಾರ ಹೊರಡಿಸಿರುವ ಆದೇಶ ವಾಪಸ್ ಪಡೆಯಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಎಲ್.ಕೆ.ಜಿ, ಯು.ಕೆ.ಜಿ ನಡೆಸಲು ಸೌಲಭ್ಯ ಕಲ್ಪಿಸಬೇಕು. ಉಪಧನ ಪಡೆಯಲು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಅರ್ಹರು ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಸೇವಾ ನಿವೃತ್ತಿ ಹೊಂದಿದರೆ ಅಥವಾ ನಿಧನರಾದರೆ 3 ಲಕ್ಷ ರೂಪಾಯಿ ಕೊಡೋದಾಗಿ ಘೋಷಣೆ ಮಾಡಿತ್ತು. ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 2 ಲಕ್ಷ ರೂಪಾಯಿ ನೀಡುತ್ತೇವೆಂದು ಭರವಸೆ ಕೊಟ್ಟಿದ್ದರು. ಚುನಾವಣಾ ಪೂರ್ವದಲ್ಲಿ ಬೆಳಗಾವಿಯ ಖಾನಪುರದಲ್ಲಿ ಭರವಸೆ ಕೊಟ್ಟಿದ್ದ ಕೈ ನಾಯಕಿ ಪ್ರಿಯಾಂಕ ಗಾಂಧಿ, ಈಗ ಮರೆತು ಹೋದಂತೆ ಕಾಣಿಸುತ್ತಾ ಇದೆ. ಕೊಟ್ಟ ಮಾತಿನಂತೆ ನಡೆದು ಕೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲು ಕಾರ್ಯಕರ್ತೆಯರು ಸಜ್ಜಾಗಿದ್ದಾರೆ.

ಜೊತೆಗೆ ಸರ್ಕಾರದ ಪರ್ಯಾಯ ನೀತಿಗೆ ವಿರೋಧ ವ್ಯಕ್ತಪಡಿಸುತ್ತಿದ್ದು, ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ‌ ತರಗತಿ ಆರಂಭಿಸಲು ಮುಂದಾಗಿರುವ ಶಿಕ್ಷಣ ಇಲಾಖೆ ನಡೆ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅಂಗನವಾಡಿ ಕೇಂದ್ರಗಳಿಗೆ ಪರ್ಯಾಯವಾಗಿ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ‌ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಪ್ಲಾನ್ ನಡೆಸಿದೆ. ಇದು ಕೂಡ ಕಾರ್ಯಕರ್ತೆಯರ ಕೆಂಗಣ್ಣಿಗೆ ಕಾರಣ ಆಗಿದೆ. 262 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವುದರ ಬಗ್ಗೆ ಸುತ್ತೋಲೆ ಶಿಕ್ಷಣ ಇಲಾಖೆ ಹೊರಡಿಸಿತ್ತು. ಶಿಕ್ಷಣ ಇಲಾಖೆಯ ಈ ನಿರ್ಧಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರ ವಿರೋಧ ವ್ಯಕ್ತವಾಗಿದೆ.

ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ಯೋ, ಅದೇ ಪ್ರದೇಶಗಳಲ್ಲಿ ಶಿಶುಪಾಲಾನ ಕೇಂದ್ರಗಳನ್ನ, ಶಾಲಾ ಪೂರ್ವ ತರಗತಿಗಳನ್ನ ಪ್ರಾರಂಭಿಸಲು ಇಲಾಖೆ ಮುಂದಾಗಿದೆ. ಇದು ಅಂಗನವಾಡಿ ಕೇಂದ್ರಗಳ‌‌ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನರೇಗಾ ಯೋಜನೆಯಡಿ ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಶಿಶುಪಾಲನ ಕೇಂದ್ರಗಳನ್ನು ಪ್ರಾರಂಭಿಸಲು ಸಿದ್ಧತೆ ನಡೆಸಲಾಗುತ್ತಿದ್ದು, ಸ್ಥಳಿಯ ಸಂಸ್ಥೆಯಗಳು ಕೂಡ ಶಿಶುಪಾಲನ ಕೇಂದ್ರಗಳನ್ನು ಪ್ರಾರಂಭಿಸಿದ್ದಕ್ಕೆ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎ.ಎಸ್. ಪೀರ್ಜಾದೆ, ಬತುಲ ಕಿಲ್ಲೆದಾರ, ಶಿವಗಂಗಾ ಹೆಬ್ಬಳ್ಳಿ, ಹೇಮಲತಾ ಶಿವಮಠ, ಸಾವಿತ್ರಿ ಸಣ್ಣಪ್ಪನವರ, ಹೇಮಾ ಮೀರಜಕರ, ರೇಖಾ ಮೀರಜಕರ ಇದ್ದರು.

 


Spread the love