ಧಾರವಾಡ: ಸೆಪ್ಟೆಂಬರ್ 18 ರಿಂದ ಅಕ್ಟೋಬರ್ 1 ರವರೆಗೆ ಧಾರವಾಡ ಜಿಲ್ಲೆಯಾದ್ಯಂತ ಸಾರ್ವಜನಿಕರು, ಗಣೇಶ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಮಾಡುವವರಿದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮದ್ಯ ಮಾರಾಟ, ಸಾಗಾಟ ನಿಷೇಧಾಜ್ಞೆ ಹೊರಡಿಸಿ,
ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶಿಸಿದ್ದಾರೆ. ಧಾರವಾಡ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಮದ್ಯ ಮಾರಾಟ ಸಾಗಾಟವನ್ನು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 1ರವರೆಗೆ ಮದ್ಯಪಾನ, ಮದ್ಯ ಮಾರಾಟ ಮತ್ತು ಮದ್ಯ ಸಾಗಣಿಕೆಯನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.