Spread the love

ವಿಶ್ವ ಸಂಸ್ಥೆ: ಭಾರತದ ವಿರುದ್ಧ ವಿಶ್ವ ಸಂಸ್ಥೆಯಲ್ಲಿ ಟರ್ಕಿ ದೇಶ ಕ್ಯಾತೆ ತೆಗೆದಿದೆ. ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ವೇಳೆ ಅತ್ಯುನ್ನತ ಜಾಗತಿಕ ನಾಯಕರ 78ನೇ ಸಮ್ಮೇಳನದಲ್ಲಿ ಮಾತನಾಡಿದ ಟರ್ಕಿ ದೇಶದ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೋಗನ್, ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸಿದ್ದಾರೆ.

ದಕ್ಷಿಣ ಏಷ್ಯಾದ ಪ್ರಾದೇಶಿಕ ಶಾಂತಿ, ಸುಭದ್ರತೆ ಹಾಗೂ ಸಮೃದ್ಧಿಯ ಕುರಿತಾಗಿ ಮಾತನಾಡಿದ ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೋಗನ್, ಕಾಶ್ಮೀರದಲ್ಲಿ ಶಾಂತಿ ನೆಲೆಸಬೇಕಿದ್ದು, ಭಾರತ ಮತ್ತು ಪಾಕಿಸ್ತಾನ ನಡುವಣ ದ್ವಿಪಕ್ಷೀಯ ಮಾತುಕತೆ ಹಾಗೂ ಸಹಕಾರದಿಂದ ಮಾತ್ರ ಸಾಧ್ಯ ಎಂದು ಹೇಳಿದ್ದಾರೆ.

ಇನ್ನು ಕಾಶ್ಮೀರ ವಿಚಾರದಲ್ಲಿ ಶಾಂತಿ ನೆಲೆಸಲು ಭಾರತ ಮತ್ತು ಪಾಕಿಸ್ತಾನ ನಡುವೆ ಸೌಹಾರ್ದತೆ ಮೂಡಲು ಟರ್ಕಿ ದೇಶವು ತನ್ನ ಬೆಂಬಲ ಮುಂದುವರೆಸಲಿದೆ ಎಂದೂ ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೋಗನ್ ಭರವಸೆ ನೀಡಿದ್ಧಾರೆ.


Spread the love