Spread the love

ಮೈಸೂರು: ಕರ್ನಾಟಕ ಬಂದ್‌ಗೆ ಮೈಸೂರಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ಹೌದು, ತುರ್ತು ಸೇವೆ ಹೊರತುಪಡಿಸಿ ಎಲ್ಲ ಸೇವೆಗಳೂ ಬಂದ್ ಮಾಡಲು ಬಸ್, ಲಾರಿ, ಟ್ಯಾಕ್ಸಿ, ಆಟೋ ಚಾಲಕರು ಮತ್ತು ಮಾಲೀಕರ ಸಂಘದವರು ಬೆಂಬಲ ಸೂಚಿಸಿದ್ದಾರೆ.

ಅರಮನೆ ಮುಂಭಾಗ ಕಾವೇರಿ ಕ್ರಿಯಾ ಸಮಿತಿ ಸದಸ್ಯರ ಸಭೆ ನಡೆಸಿದ್ದು, ಮೈಸೂರಿನಲ್ಲಿ ಹಲವು ಸಂಘಗಳು ಬೆಂಬಲ ನೀಡಿವೆ. ಬೆಳಿಗ್ಗೆ 6 ಗಂಟೆಯಿಂದ ಮೈಸೂರು ಕೇಂದ್ರೀಯ ಬಸ್‌ ನಿಲ್ದಾಣದ ಬಳಿಯಿಂದ ಹೋರಾಟ ಆರಂಭವಾಗಲಿದೆ. ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆ, ಮೈಸೂರು ರಕ್ಷಣಾ ವೇದಿಕೆ, ಕರ್ನಾಟಕ ಸೇನಾ ಪಡೆ ಸೇರಿ ಹಲವು ಸಂಘಟನೆಗಳು ಸಾಥ್ ನೀಡಲಿದ್ದಾರೆ.

 


Spread the love