Spread the love

ಬೆಂಗಳೂರು: ಬೆಂಗಳೂರಿನಲ್ಲಿ ಮೊಬೈಲ್ ಅಯಪ್ ಆಧಾರಿತ ಓಲಾ, ಉಬರ್ ಸೇವೆಗಳಲ್ಲಿ ಆಟೋಗಳ ಬಳಕೆಗೆ ದರ ನಿಗದಿಗೆ ಕುರಿತ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್​ 5ಕ್ಕೆ ಮುಂದೂಡಿದೆ. ಓಲಾ, ಉಬರ್ ಆಟೋರಿಕ್ಷಾ ಸೇವೆ ಸ್ಥಗಿತಗೊಳಿಸಲು ಸಾರಿಗೆ ಇಲಾಖೆ ಹೊರಡಿಸಿದ ಆದೇಶ ಪ್ರಶ್ನಿಸಿ ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಉಬರ್ ಇಂಡಿಯಾ,

ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್​.ಜಿ. ಪಂಡಿತ್​ ಅವರಿದ್ದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಹಾಜರಾಗಿ ಸರ್ಕಾರ ಬೆಲೆ ನಿಗದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊರಡಿಸಿದ ಆದೇಶವನ್ನು ಸಲ್ಲಿಸಿದರು. ಇದನ್ನು ಪರಿಶೀಲಿಸಿದ ನ್ಯಾಯಪೀಠವು ವಿಚಾರಣೆ ಮುಂದೂಡಿದೆ.


Spread the love

By admin