Spread the love

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ. ದ್ವಿತೀಯ ಪಿಯುಸಿ 2023ರ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

 

ಮಾರ್ಚ್ 9ರ ಗುರುವಾರ ಆರಂಭವಾಗುವ ಪರೀಕ್ಷೆಯು ಮಾರ್ಚ್ 29ರ ತನಕ ನಡೆಯಲಿದೆ. ಮಧ್ಯದಲ್ಲಿ ಒಟ್ಟು 7 ದಿನಗಳಲ್ಲಿ ಪರೀಕ್ಷೆಗಳು ಇರುವುದಿಲ್ಲ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಒಟ್ಟು 36 ವಿವಿಧ ವಿಷಯಗಳು, ಭಾಷೆಗೆ ಸಂಬಂಧಿಸಿದಂತೆ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಮಂಡಳಿಯು ಮಾಹಿತಿ ನೀಡಿದೆ.


Spread the love

By admin