ಬೆಂಗಳೂರು : ಕರ್ನಾಟಕದಲ್ಲಿ ಇನ್ಮುಂದೆ ಯುಗಾದಿಯನ್ನು ‘ಧಾರ್ಮಿಕ ದಿನ’ವನ್ನಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರದಿಂದ ಆದೇಶವನ್ನು ಹೊರಡಿಸಲಾಗಿದೆ.
ಯುಗಾದಿ ಹಬ್ಬದ ದಿನವನ್ನು ಧಾರ್ಮಿಕ ದಿನವನ್ನಾಗಿ ಆಚರಿಸಲು ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಿಗೆ ಸುತ್ತೋಲೆ ಹೊರಡಿಸುವಂತೆ ಸಚಿವೆ ಶಶಿಕಲಾ ಜೊಲ್ಲೆ ಅವರು ಸೂಚಿಸಿದ್ದಾರೆ ಅಂಥ ತಿಳಿದು ಬಂಧಿದೆ.
ಪ್ರಸಕ್ತ ಸಾಲಿನಿಂದ ಪ್ರತಿವರ್ಷ ಶುಭಕೃತ್ ನಾಮ ಸಂವತ್ಸರ ಚಾಂದ್ರಮಾನ/ಸೌರಮಾನ ಯುಗಾದಿಯ ದಿನಗಳಂದು ನಮ್ಮ ಇಲಾಖಾ ವ್ಯಾಪ್ತಿಯ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಧಾರ್ಮಿಕ ದಿನಾಚರಣೆಯನ್ನು ಆಚರಿಸುವಂತೆ ಸೂಚನೆ ನೀಡಿದ್ದಾರೆ.
ರಾಜ್ಯ ಧಾರ್ಮಿಕ ದಿನಾಚರಣೆಯ ಮಾರ್ಗಸೂಚಿಗಳು ಹೀಗಿದೆ
- ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಲ್ಲಿ ಯುಗಾದಿಯನ್ನು ‘ಧಾರ್ಮಿಕ ದಿನವನ್ನಾಗಿ’ ಆಚರಿಸುವುದು
- ಹಬ್ಬದ ಈ ಸಮಯದಲ್ಲಿ ರಾಜ್ಯದ ಅಭಿವೃದ್ದಿಗಾಗಿ ವಿಶೇಷ ಪೂಜೆ ಮತ್ತು ಪ್ರಾರ್ಥನೆಗಳನ್ನು ರಾಜ್ಯದ ದೇವಾಲಯಗಳಲ್ಲಿ ಕೈಗೊಳ್ಳುವುದು
- ದೇವಾಲಯಗಳಲ್ಲಿ ಸಕ್ರೀಯವಾಗಿರುವ ಸ್ವಯಂ ಸೇವ ತಂಡಗಳಿಂದ ಭಜನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಲಭ್ಯತೆಗೆ ಅನುಸಾರವಾಗಿ ಆಯೋಜಿಸುವುದು
- ಪ್ರತಿ ದೇವಾಲಗಳಲ್ಲಿ ಹೆಚ್ಚಿನ ಭಕ್ತರು ಪಾಲ್ಗೊಳ್ಳುವಂತೆ ಆಡಳಿತ ಮಂಡಳಿಯು ಈ ಸಂಧರ್ಭವನ್ನು ಬಳಸಿ ಕಾರ್ಯಕ್ರಮಗಳನ್ನು ರೂಪಿಸುವುದು
- ಧಾರ್ಮಿಕ ದಿನಾಚರಣೆಯನ್ನು ಪ್ರತಿ ದೇವಾಲಯಗಳ ಧಾರ್ಮಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ತಿಳಿಯಪಡಿಸುವು ರೀತಿಯಲ್ಲಿ ಕ್ರಿಯಾತ್ಮಕವಾಗಿ ಆಚರಿಸಬೇಕು
- ರಾಜ್ಯದ ಶಿಷ್ಟಾಚಾರ ಪಾಲಿಸಿಕೊಂಡು ಕಾರ್ಯಕ್ರಮಗಳನ್ನು ಧಾರ್ಮಿಕ ಮತ್ತು ಸಾಂಸ್ಕೃತಿಕವಾಗಿ ವಿಶಿಷ್ಠ ರೀತಿಯಲ್ಲಿ ಆಯೋಜಿಸಬೇಕು.