Spread the love

ಬೆಂಗಳೂರು : ಜಮೀರ್ ಅಹಮದ್, ನಿಮಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?

ಎಂದು ರಾಜ್ಯ ಜೆಡಿಎಸ್ ಶಾಸಕ ಜಮೀರ್ ಅಹಮ್ಮದ್ ವಿರುದ್ಧ ಟ್ವೀಟಾಸ್ತ್ರ ಪ್ರಯೋಗಿಸಿದೆ. ಸರಣಿ ಟ್ವೀಟ್ ‌ಮಾಡಿರುವ ಜೆಡಿಎಸ್, ರಾಜಕಾರಣಕ್ಕಾಗಿ ನೀವು ಆ ಸಮುದಾಯವನ್ನು ಹೇಗೆ ನಡೆಸಿಕೊಂಡಿದ್ದಿರಿ?. ಹೆಚ್ ಡಿ ದೇವೇಗೌಡರ ಕುಟುಂಬ ಹೇಗೆ ನಡೆಸಿಕೊಳ್ಳುತ್ತಿದೆ ಎನ್ನುವುದು ದೇಶಕ್ಕೆ ಗೊತ್ತಿದೆ. ಭೂತದ ಬಾಯಲ್ಲಿ ಭಗವದ್ಗೀತೆ ಚೆನ್ನಾಗಿರಲ್ಲ. ಅರಮನೆಯಂಥ ವಿಲಾಸಿ ಭವನದಲ್ಲಿ ಐಷಾರಾಮಿ ಜೀವನ ನಡೆಸುವ ನಿಮಗೆ, ನಿಮ್ಮದೇ ಕ್ಷೇತ್ರದ ಗೌರಿಪಾಳ್ಯ, ಪಾದರಾಯನಪುರದ ಬಡ ಮುಸ್ಲಿಂ ಬಂಧುಗಳು ಎಂಥ ಕಷ್ಟದ ಸ್ಥಿತಿಯಲ್ಲಿ ಇದ್ದಾರೆ ಎನ್ನುವುದು ಗೊತ್ತಾ? ಕಾಮಾಲೆ ಕಣ್ಣಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಮೊಸಳೆ ಕಣ್ಣೀರು ಹಾಕುವ ನಿಮಗೆ ಮುಸ್ಲಿಮರ ನೈಜಸ್ಥಿತಿಯ ಬಗ್ಗೆ ಅರಿವಿದೆಯಾ? ಎಂದು ಪ್ರಶ್ನಿಸಿದೆ.

ಹರಕಲು ನಾಲಿಗೆಯ ಜಮೀರ್, ಮುಸ್ಲಿಂ ಸಮುದಾಯಕ್ಕೆ ಸೇರಿದ ನಿಮಗೆ ರಾಜಕೀಯ ಜನ್ಮಕೊಟ್ಟಿದ್ದು ಇದೇ ಕುಮಾರಣ್ಣ. ವಿಧಾನಸಭೆಯ ಮಾರ್ಷಲ್ ಗಳು ಕುತ್ತಿಗೆಪಟ್ಟಿ ಹಿಡಿದು ಹೊರದಬ್ಬಿದಾಗ ಇದೇ ಕುಮಾರಣ್ಣ ನಿಮ್ಮ ಮಾನ ಕಾಪಾಡಿದ್ದು. ಅಂದು ಶಪಥಗೈದ ಕುಮಾರಣ್ಣ ನಿಮ್ಮನ್ನು ಶಾಸಕರನ್ನಾಗಿ ಮಾಡಿದ್ದು ನೆನಪಿಲ್ಲವೇ? ನಿಯತ್ತಿಲ್ಲದ ನಿಮಗೆ ಇದೆಲ್ಲಾ ಅರ್ಥವಾದೀತೆ? ಎಂದು ಕಿಡಿಕಾರಿದೆ.


Spread the love

By admin